March 20, 2026

ಲೋಕಾಯುಕ್ತ ಇನ್ ಸ್ಪೆಕ್ಟರ್ ಎಂದು ಹೇಳಿಕೊಂಡು ಅಧಿಕಾರಿಗಳಿಂದ ಹಣ ವಸೂಲಿ: ಆರೋಪಿಯ ಬಂಧನ

0
image_editor_output_image-1120178314-1704311177500.jpg

ಬೆಂಗಳೂರು: ಲೋಕಾಯುಕ್ತ ಇನ್ಸ್‌ಪೆಕ್ಟರ್ ಎಂದು ಹೇಳಿಕೊಂಡು ಸರ್ಕಾರಿ ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿಯನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಆಂಧ್ರಪ್ರದೇಶ ಮೂಲದ ಶ್ರೀನಿವಾಸ್ ರೆಡ್ಡಿ ಎಂದು ಗುರುತಿಸಲಾಗಿದೆ. ವಂಚನೆಗೊಳಗಾಗಿರುವ ಬಗ್ಗೆ ಸರ್ಕಾರಿ ಅಧಿಕಾರಿ ರಾಮದಾಸ್ ಅವರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಆರೋಪಿಯನ್ನು ಬಂಧಿಸಲಾಗಿದೆ.

‘ಲೋಕಾಯುಕ್ತ ಇನ್ಸ್‌ಪೆಕ್ಟರ್ ಸೋಗಿನಲ್ಲಿ ಅಧಿಕಾರಿಗಳಿಗೆ ಕರೆ ಮಾಡಿ ಅವರಿಂದ ಹಣ ವಸೂಲಿ ಮಾಡುತ್ತಿದ್ದ ವಂಚಕನನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಸರ್ಕಾರಿ ಅಧಿಕಾರಿಯಿಂದ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!