March 20, 2026

ಬಂಟ್ವಾಳ ಸಹಿತ ಕರಾವಳಿಯ ಬಹುತೇಕ ಕಡೆಗಳಲ್ಲಿ ಮಳೆ

0
image_editor_output_image-897305339-1704343534140.jpg

ಮಂಗಳೂರು: ದ.ಕ. ಜಿಲ್ಲೆ ಕರಾವಳಿಯಲ್ಲಿ ಬಹುತೇಕ ಕಡೆಗಳಲ್ಲಿ ಇಂದು ನಸುಕಿನ ವೇಳೆ ಮಳೆ ಸುರಿದಿರುವುದು ವರದಿಯಾಗಿದೆ.

ದ.ಕ. ಜಿಲ್ಲೆಯಲ್ಲಿ ಗುರುವಾರ ಮುಸ್ಸಂಜೆಯಿಂದಲೇ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ಕೆಲವೆಡೆ ರಾತ್ರಿಯಿಂದಲೇ ತುಂತುರು ಮಳೆ ಸುರಿದಿದೆ. ಮಂಗಳೂರು ನಗರದಲ್ಲಿ ಬೆಳಗ್ಗೆ ಗುಡುಗು ಸಹಿತ ತುಂತುರು ಮಳೆಯಾಗಿದೆ.

ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ತಾಲೂಕಿನಾದ್ಯಂತ ಮಳೆ ಸುರಿದಿದೆ. ಬಂಟ್ವಾಳ ತಾಲೂಕಿನ ಹಲವೆಡೆ ಉತ್ತಮ ಮಳೆಯಾಗಿದೆ‌. ಜಿಲ್ಲಾದ್ಯಂತ ಮೋಡ ಕವಿದ ವಾತಾವರಣ ಮುಂದುವರಿದಿದೆ.

Leave a Reply

Your email address will not be published. Required fields are marked *

error: Content is protected !!