ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಸಹೋದರಿ ವೈ.ಎಸ್.ಶರ್ಮಿಳಾ ಕಾಂಗ್ರೆಸ್ ಸೇರ್ಪಡೆ
ದೆಹಲಿ: ಆಂಧ್ರಪ್ರದೇಶದ ದಿವಂಗತ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರ ಪುತ್ರಿ ಮತ್ತು ಹಾಲಿ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್.ಶರ್ಮಿಳಾ ಅವರು ಗುರುವಾರ ನವದೆಹಲಿಯಲ್ಲಿ ಕಾಂಗ್ರೆಸ್ ಸೇರಿದ್ದಾರೆ.
ವೈಎಸ್‌ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕಿ ವೈ.ಎಸ್.ಶರ್ಮಿಳಾ ಅವರು ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ಗೆ ಸೇರಿದರು. ಇಂದು ನಡೆದ ಸರಳ ಸಮಾರಂಭದಲ್ಲಿ ರಾಹುಲ್ ಗಾಂಧಿ ಶರ್ಮಿಳ ಅವರಿಗೆ ಪಾರ್ಟಿಯ ಶಾಲನ್ನು ಹಾಕಿ ಪಾರ್ಟಿಗೆ ಬರಮಾಡಿಕೊಂಡರು.





