March 20, 2026

ಉಳ್ಳಾಲ: ಮನೆಗೆ ಸಿಡಿಲು ಬಡಿದು ವಿದ್ಯುತ್ ಸಲಕರಣೆಗಳು‌ ಭಸ್ಮ

0
image_editor_output_image918851321-1704370306696.jpg

ಉಳ್ಳಾಲ: ಅಕಾಲಿಕ ಮಳೆಯ ಸಂದರ್ಭದಲ್ಲಿಯೇ ಮನೆಯೊಂದಕ್ಕೆ ಸಿಡಿಲು ಬಡಿದು ವಿದ್ಯುತ್ ಸಲಕರಣೆಗಳು ಸುಟ್ಟುಹೋಗಿ ಅಪಾರ ನಷ್ಟ ಉಂಟಾದ ಘಟನೆ ಉಳ್ಳಾಲ ಬಂಡಿಕೊಟ್ಯದ ನೇಲ್ಯ ಇಲ್ ಎಂಬಲ್ಲಿ ಸಂಭವಿದೆ.

ಉಳ್ಳಾಲ ಬಂಡಿಕೊಟ್ಯದ ಪ್ರವೀಣ್ ಗುರಿಕಾರ ಎಂಬವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಸಲಕರಣೆಗಳಿಗೆ ಹಾನಿಯಾಗಿ ಅಪಾರ ನಷ್ಟ ಉಂಟಾಗಿದೆ. ವಿದ್ಯುತ್ ವೈರ್, ಸೇರಿದಂತೆ ಹಲವು ಸಲಕರಣೆಗಳು ಸಂಪೂರ್ಣ ಸುಟ್ಟು ನಷ್ಟ ಸಂಭವಿಸಿದೆ.

ಬೆಳಗ್ಗೆ ಮನೆಮಂದಿ ಮನೆಯಲ್ಲಿದ್ದ ಸಂದರ್ಭ ಘಟನೆ ನಡೆದಿದೆ. ಕಂದಾಯ ಇಲಾಖೆಗೆ ಈ ಕುರಿತು ದೂರು ನೀಡಲಾಗಿದೆ. ನಷ್ಟದ ಪ್ರಮಾಣವನ್ನು ಅಂದಾಜಿಸಿಲ್ಲ.

Leave a Reply

Your email address will not be published. Required fields are marked *

error: Content is protected !!