August 31, 2026

ಮಂಗಳೂರು: ವಿಷ ಸೇವಿಸಿ ಕಾರ್ಪೋರೇಟರ್ ಆತ್ಮಹತ್ಯೆಗೆ ಯತ್ನ

0
IMG-20240104-WA0055.jpg

ಮಂಗಳೂರು: ನಗರದ ಬೋಳೂರು ವಾರ್ಡ್ ನ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಅವರು ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕಾರ್ಪೋರೇಟರ್ ಅವರು ಸದ್ಯ ನಗರದ‌ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಗುರುವಾರ ನಗರ ಸ್ಟೇಟ್ ಬ್ಯಾಂಕ್ ಬಳಿ ಕಾರಿನಲ್ಲಿ ಕುಳಿತು ಜಗದೀಶ್‌ ಶೆಟ್ಟಿ ವಿಷ ಸೇವನೆ ಮಾಡಿದ್ದಾರೆ. ಕಾರಿ‌ನಲ್ಲಿದ್ದ ಅವರನ್ನು ಗಮನಿಸಿದ ಸಾರ್ವಜನಿಕರು, ಆಸ್ಪತ್ರೆಗೆ ದಾಖಲಿಸಿದ್ದಾರೆ.

ವಿಷ ಸೇವನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *

You may have missed

error: Content is protected !!