ಕರ್ನಾಟಕದಲ್ಲಿ ಗುರುವಾರ 298 ಹೊಸ ಕೋವಿಡ್ ಪ್ರಕರಣಗಳು ದೃಢ: 4 ಮಂದಿ ಮೃತ್ಯು
ಬೆಂಗಳೂರು: ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 298 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ನಾಲ್ವರು ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಇಂದು 298 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು229 ಮಂದಿ ಇಂದು ಗುಣಮುಖರಾಗಿ ಬಿಡುಗಡೆಯಾಗಿದ್ದು ಒಟ್ಟು 1240 ಮಂದಿ ಸಕ್ರಿಯ ಸೋಂಕಿತರಿದ್ದಾರೆ.
ಇನ್ನು 1240 ಮಂದಿ ಸೋಂಕಿತರ ಪೈಕಿ 1168 ಮಂದಿ ಮನೆಗಳಲ್ಲಿಯೇ ಐಸೋಲೇಶನ್ ಆಗಿದ್ದಾರೆ. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಪೈಕಿ 12 ಮಂದಿ ಐಸಿಯುನಲ್ಲಿದ್ದಾರೆ.





