ಕಾಡಾನೆ ದಾಳಿಯಿಂದ ಕೂಲಿ ಕಾರ್ಮಿಕ ಸ್ಥಳದಲ್ಲೇ ಮೃತ್ಯು
ಹಾಸನ : ಕಾಡಾನೆ ದಾಳಿಯಿಂದ
ಕೂಲಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೇಲೂರು ತಾಲ್ಲೂಕಿನ ಮತ್ತಾವರದಲ್ಲಿ ಗುರುವಾರ ಸಂಜೆ ನಡೆದಿದೆ.
ಮತ್ತಾವರ ಗ್ರಾಮದ ವಸಂತ (43) ಮೃತಪಟ್ಟ ವ್ಯಕ್ತಿಯಾಗಿದ್ದು,
ಸಂಜೆಯ ವೇಳೆ ತೋಟದ ಮನೆಯಲ್ಲಿದ್ದ ಅವರ ಮೇಲೆ ಕಾಡಾನೆ ದಾಳಿಯಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಆನೆ ದಾಳಿಗೆ ನಿರಂತರವಾಗಿ ಸಾವುಗಳು ಸಂಭವಿಸುತ್ತಿದ್ದರೂ, ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದು 82 ನೇ ಸಾವಾಗಿದೆ.





