March 20, 2026

ಉಡುಪಿ: ಚಾಲಕನಿಗೆ ಹೃದಯಾಘಾತವಾಗಿ ಕಂಬಕ್ಕೆ ಢಿಕ್ಕಿ ಹೊಡೆದ ಆಟೊ: ಪ್ರಯಾಣಿಕರಿಗೆ ಗಾಯ

0
image_editor_output_image-1269804064-1704421791293.jpg

ಉಡುಪಿ: ಆಟೋ ಚಲಿಸುತ್ತಿದ್ದ ವೇಳೆಯೇ ಚಾಲಕರೊಬ್ಬರಿಗೆ ಹೃದಯಾಘಾತ ಸಂಭವಿಸಿದ ಘಟನೆ ಉಡುಪಿಯಲ್ಲಿ ಗುರುವಾರ ನಡೆದಿದೆ.

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಮಹಿಳಾ ಪ್ರಯಾಣಿಕರಿಬ್ಬರು ಗಾಯಗೊಂಡಿದ್ದಾರೆ.

ಕಾಡುಬೆಟ್ಟುವಿನ ಸುರೇಶ್ ಅವರು ರಿಕ್ಷಾದಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರನ್ನು ಅಜ್ಜರಕಾಡುನಿಂದ ಉಡುಪಿ ಬಸ್ ನಿಲ್ದಾಣಕ್ಕೆ ಕರೆದೊಯ್ಯುತ್ತಿದ್ದ ವೇಳೆ ಹಠಾತ್ ಹೃದಯಘಾತವಾಗಿ ಕುಸಿದು ಬಿದ್ದಿದ್ದಾರೆ.

ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಇನ್ನೋರ್ವ ರಿಕ್ಷಾ ಚಾಲಕ ಮತ್ತು ಇತರರು ತತ್ ಕ್ಷಣ ಸುರೇಶ್ ಅವರನ್ನು ಅಜ್ಜರಕಾಡು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಸುರೇಶ್ ಏಕಾಏಕಿ ಕುಸಿದು ಬಿದ್ದ ಕಾರಣ ರಿಕ್ಷಾ ವಿರುದ್ಧ ದಿಕ್ಕಿನಲ್ಲಿ ಚಲಿಸಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ. ಮಹಿಳಾ ಪ್ರಯಾಣಿಕರು ಗಾಯಗೊಂಡಿದ್ದು,ಹೆಚ್ಚಿನ ಗಾಯಗಳಿಲ್ಲದೆ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!