ಕಡಬ: ವಾಹನ ಪಾರ್ಕಿಂಗ್ ವಿಚಾರದಲ್ಲಿ ವ್ಯಕ್ತಿಗೆ ತಂಡದಿಂದ ಹಲ್ಲೆ
ಕಡಬ: ವಾಹನ ಪಾರ್ಕಿಂಗ್ ವಿಚಾರದಲ್ಲಿ ವಾಚ್ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ತಂಡವೊಂದು ಹಾಡುಹಗಲೇ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಹಲ್ಲೆಗೊಳಗಾದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸದ್ಯ ಈ ಘಟನೆಗೆ ಸಂಬಂಧಿಸಿದ ವೀಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಹಲ್ಲೆಗೆ ಒಳಗಾಗಿರುವ ಐಡಿಯಲ್ ಕಾಂಪ್ಲೆಕ್ಸ್‌ನ ಲಕ್ಷ್ಮಣ ರೈ ಎಂಬವರ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ಕಡಬದ ಸಮುದಾಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. ಹಲ್ಲೆ ಮಾಡಿದವರ ವಿರುದ್ದ ದೂರು ನೀಡಿದ ಲಕ್ಷ್ಮಣ ರೈ ಅವರಿಗೆ ನ್ಯಾಯಾಲದ ಆದೇಶ ಪಡೆಯುವಂತೆ ಪೊಲೀಸರು ಹಿಂಬರಹ ನೀಡಿ ಸೂಚಿಸಿರುವುದಾಗಿ ತಿಳಿದುಬಂದಿದೆ.





