March 18, 2026

ರಾಮ, ಕೃಷ್ಣನ ಕುರಿತು ವಿವಾದಾತ್ಮಕ ಹೇಳಿಕೆ: ಶಿವಸೇನಾ ನಾಯಕಿ ವಿರುದ್ಧ ಕೇಸು ದಾಖಲು

0
IMG-20240105-WA0011.jpg

ನಾಸಿಕ್: ಶ್ರೀರಾಮ ಮತ್ತು ಶ್ರೀಕೃಷ್ಣನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಶಿವಸೇನಾ (ಯುಬಿಟಿ) ನಾಯಕಿ ಸುಷ್ಮಾ ಅಂಧಾರೆ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಲೆಗಾಂವ್ ತಾಲೂಕು ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ಥಳೀಯ ನಿವಾಸಿ ಅಮನ್ ಪರದೇಶಿ ನೀಡಿದ ದೂರಿನ ಆಧಾರದ ಮೇಲೇ ಪ್ರಕರಣ ದಾಖಲಿಸಲಾಗಿದೆ ಎಂದು ನಾಸಿಕ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನು ಸ್ಥಳೀಯ ನಿವಾಸಿ ನೀಡಿರುವ ದೂರಿನಲ್ಲಿ ಶಿವಸೇನಾ ನಾಯಕಿ ಸುಷ್ಮಾ ಅಂಧಾರೆ ಅವರು ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡುತ್ತಿದ್ದ ವೇಳೆ ಶ್ರೀರಾಮ ಮತ್ತು ಶ್ರೀಕೃಷ್ಣನ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಇದು ಸಮಾಜದ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!