May 9, 2026

ನೆಲ್ಯಾಡಿ: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

0
image_editor_output_image-1739188094-1704512632870

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಶನಿವಾರ ಬೆಳಗಿನ ಜಾವ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ಸಂಭವಿಸಿದೆ.

ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಶಿರಾಡಿ ಘಾಟ್ ನಲ್ಲಿ ರಸ್ತೆ ಬದಿ ಪಲ್ಟಿಯಾಗಿ ಕಾಂಕ್ರೀಟ್ ತಡೆಗೋಡೆಗೆ ವಾಲಿ ನಿಂತಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!