February 4, 2026

ಮಂಗಳೂರು: ಅಕ್ರಮ ಗಾಂಜಾ ಸಾಗಾಟ: ಆರೋಪಿ ಪೊಲೀಸರ ವಶಕ್ಕೆ

0
AA-060124-ganjaaropi.jpg

ಮಂಗಳೂರು: ಕಾರಿನಲ್ಲಿಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನ್ನು ಪೊಲೀಸರು ಜ. 5 ರಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಇದ್ರಿಸ್ ಪಾಷಾ ಪಾಕೇಟ್ ಎಂದು ಗುರುತಿಸಲಾಗಿದೆ.

ಆರೋಪಿಯಿಂದ 1.550 ಗ್ರಾಂ. ತೂಕದ ಗಾಂಜಾ ಹಾಗೂ ಒಂದು ಮಾರುತಿ ಕಾರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಬೇಲೂರಿನಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದನು. ಹಾಗೂ ಈತ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಆರೋಪಿಯನ್ನು ಪಿ.ಎಸ್.ಐ. ಸಿ.ಇ.ಎನ್. ಅಪರಾಧ ಪೊಲೀಸ್ ಠಾಣೆಯ ಸಿಬ್ಬಂದಿಗಳು ವಶಕ್ಕೆ ಪಡೆದಿದ್ದು, ಈ ಬಗ್ಗೆ ಜಿಲ್ಲಾ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!