March 26, 2026

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ- ನಾಲ್ವರಿಗೆ ಗಾಯ

0
IMG-20240107-WA0012.jpg

ಉಪ್ಪಿನಂಗಡಿ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಗೆ ಮಗುಚಿ ಬಿದ್ದು ನಾಲ್ವರು ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಶಿರಾಡಿ ಎಂಬಲ್ಲಿ ಶನಿವಾರ ಸಂಭವಿಸಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಕರನ್ನು ಕರೆ ತರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಶಿರಾಡಿಯ ಪೆಟ್ರೋಲ್ ಪಂಪು ಬಳಿ ಹೆದ್ದಾರಿ ಬದಿಗೆ ಮಗುಚಿ ಬಿದ್ದಿದೆ. ಘಟನೆಯಲ್ಲಿ ಸಕಲೇಶಪುರ ನಿವಾಸಿ ಇಲ್ಯಾಸ್ (30), ಮಹಮ್ಮದ್ ರಾಶೀಖ್ (19), ಬಸ್ ನಿರ್ವಾಹಕ ಮುಸ್ತಾಫ ಹಾಗೂ ಬಸ್ ಚಾಲಕ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!