March 26, 2026

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕನ ಗುಂಡಿಕ್ಕಿ ಹತ್ಯೆ

0
hr-070123-firing1.jpg


 
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಲ್ಲಿ ಟಿಎಂಸಿ ನಾಯಕ ಸತ್ಯನ್ ಚೌಧರಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಗಂಭೀರವಾಗಿ ಗಾಯಗೊಂಡಿದ್ದ ಸತ್ಯನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇನ್ನು ಭಾನುವಾರ ಮಧ್ಯಾಹ್ನ ಸತ್ಯನ್ ಮನೆ ಸಮೀಪ ಫ್ಲ್ಯಾಟ್‌ನ ಕೆಳಗಿರುವ ಅಂಗಡಿಯಲ್ಲಿ ಕುಳಿತಿದ್ದು, ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸತ್ಯನ್‌ನ ಮೇಲೆ ಸಮೀಪದಿಂದ ಗುಂಡು ಹಾರಿಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಘಟನೆಯಲ್ಲಿ ಭಾಗಿಯಾದವರು ಯಾರು ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.”

Leave a Reply

Your email address will not be published. Required fields are marked *

error: Content is protected !!