March 26, 2026

ಬೈಂದೂರು: ನಿಂತ ಲಾರಿಗೆ ಕಾರು ಢಿಕ್ಕಿ: ಮಹಿಳೆ ಮೃತ್ಯು

0
hr-070123-accident1.jpg


 
ಬೈಂದೂರು : ಪಡುವರಿ ಗ್ರಾಮದ ಒತ್ತಿನೆಣೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿಂತಿದ್ದ ಲಾರಿಯ ಹಿಂಭಾಗಕ್ಕೆ ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಕಾರಿನಲ್ಲಿ ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಲಾವಣ್ಯ ಎಂದು ಗುರುತಿಸಲಾಗಿದೆ.

ಇನ್ನು ಲಾವಣ್ಯ ಅವರ ತಲೆಗಾದ ಗಂಭೀರ ಗಾಯದಿಂದ ಬೈಂದೂರು ಸರಕಾರಿ ಆಸ್ಪತ್ರೆಗೆ ತರುವಷ್ಟರಲ್ಲಿ ಮೃತಪಟ್ಟಿದ್ದಾರೆ.

ಕೊಚ್ಚಿಯಿಂದ ಸರಕು ತುಂಬಿಸಿಕೊಂಡು ಗೋವಾಕ್ಕೆ ಹೋಗುತಿದ್ದ ಲಾರಿಯನ್ನು ಚಾಲಕ ಮೂತ್ರ ವಿಸರ್ಜನೆಗೆಂದು ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದರು, ಹಿಂದಿನಿಂದ ವೇಗವಾಗಿ ಬಂದ ಕಾರನ್ನು ಚಾಲಕ ಹೇಮಂತ್, ವೇಗ ನಿಯಂತ್ರಿಸಲಾಗದೇ ಲಾರಿಯ ಬಲಬದಿ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದ್ದಾನೆ.

ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.”

Leave a Reply

Your email address will not be published. Required fields are marked *

error: Content is protected !!