March 26, 2026

ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು:
ಮಾಣಿ-ಮೈಸೂರು ರಾಜ್ಯ ಹೆದ್ದಾರಿಯಲ್ಲಿ ನಡೆದಿದ್ದ ಅಪಘಾತ

0
IMG-20240107-WA0097

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿಯಲ್ಲಿ ಡಿ.31ರಂದು ನಡೆದ ಹೋಂಡಾ ಆಕ್ಟೀವಾ ಹಾಗೂ ಕಾರು ಅಪಘಾತದಲ್ಲಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕ್ಟೀವಾ ಸಹ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಇರ್ದೆ ಗ್ರಾಮದ ಉಪ್ಪಳಿಗೆ ನಾರಾಯಣ ನಾಯ್ಕ ಮತ್ತು ಕಲ್ಯಾಣ ದಂಪತಿ ಪುತ್ರ ಪ್ರವೀಣ (18) ಮೃತ ಯುವಕ. ಡಿ.31 ರಂದು ರಾತ್ರಿ ತನ್ನ ಪರಿಚಿತರೊಂದಿಗೆ ಪುತ್ತೂರಿಗೆ ಬಂದಿದ್ದ ಪ್ರವೀಣ್ ಮನೆಗೆ ಹಿಂತಿರುಗುವ ವೇಳೆ ಮುಕ್ರಂಪಾಡಿ ಸಮೀಪಿಸುತ್ತಿದ್ದಂತೆ ಎದುರುಗಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.

ಘಟನೆಯಿಂದ ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡಿದ್ದ ಪ್ರವೀಣ್ ನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜ್ಯೋತಿಯಲ್ಲಿರುವ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರವೀಣ್ ಜ.7 ರಂದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಮೃತ ಪ್ರವೀಣ ನ ಕಣ್ಣು, ಲಿವರ್ ಹಾಗೂ ಕಿಡ್ನಿ ದಾನ ಮಾಡಲು ಮನೆಯವರು ಒಪ್ಪಿಗೆ ನೀಡಿರುವುದಾಗಿ ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!