September 26, 2026

ಪಡುಬಿದ್ರಿ: ಸ್ಕೂಟಿಗೆ ಬಸ್ ಢಿಕ್ಕಿ: ಓರ್ವ ಸಾವು

0
image_editor_output_image-738250569-1704692307894.jpg

ಪಡುಬಿದ್ರಿ: ಪಲಿಮಾರಿನಿಂದ ಸ್ಕೂಟಿಯಲ್ಲಿ ಎರ್ಮಾಳಿನ ಪೂಂದಾಡು ಎಂಬಲ್ಲಿಗೆ ರವಿವಾರ ರಾತ್ರಿ ನಾಟಕ ನೋಡಲು ತೆರಳುತ್ತಿದ್ದಾಗ ಹೆದ್ದಾರಿಯಲ್ಲಿ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸೊಂದು ಢಿಕ್ಕಿಯಾಗಿ ಪಲಿಮಾರು ದರ್ಕಾಸ್ತು ನಿವಾಸಿ ಧನ್ ರಾಜ್ ಪಲಿಮಾರು(೧೭) ಮುಕ್ಕದ ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.

ತುಷಾರ್ ಪಲಿಮಾರು ಹಾಗೂ
ಕೌಶಿಕ್ ಎರ್ಮಾಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

 

ಕಾರ್ಕಳ ರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುವ ಸಂದರ್ಭದಲ್ಲಿ ಈ ಅಪಘಾತವು ಸಂಭವಿಸಿದೆ. ಅಪಘಾತದಲ್ಲಿ ಸ್ಕೂಟಿಯು ಹಾನಿಗೊಳಗಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!