ಬಾಂಗ್ಲಾದೇಶದ 5ನೇ ಬಾರಿ ಪ್ರಧಾನಿಯಾಗಿ ಶೇಖ್ ಹಸೀನಾ ಆಯ್ಕೆ
ಢಾಕಾ: ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಮತ್ತೊಮ್ಮೆ ಪ್ರಧಾನಿಯಾಗಿ ಮಿಂಚಲಿದ್ದಾರೆ. ಭಾನುವಾರ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಅವರ ಪಕ್ಷ ಅವಾಮಿ ಲೀಗ್ 300 ಸ್ಥಾನಗಳಲ್ಲಿ ಮೂರನೇ ಎರಡರಷ್ಟು ಸ್ಥಾನಗಳನ್ನು ಗೆದ್ದುಕೊಳ್ಳುವ ಮೂಲಕ ಶೇಖ್ ಹಸೀನಾ ಅವರು ಸತತ ಐದನೇ ಬಾರಿಗೆ ಪ್ರಧಾನಿಯಾಗಿ ಮರು ಆಯ್ಕೆಯಾಗಿದ್ದಾರೆ ಎನ್ನಲಾಗಿದೆ.
ಚುನಾವಣಾ ಫಲಿತಾಂಶದಲ್ಲಿ ಶೇಖ್ ಹಸೀನಾ ಅವರ ಪಕ್ಷ ಅವಾಮಿ ಲೀಗ್ 300 ಸಂಸದೀಯ ಸ್ಥಾನಗಳ ಪೈಕಿ 224 ಸ್ಥಾನಗಳನ್ನು ಗೆದ್ದುಕೊಂಡಿದೆ.
ಬಾಂಗ್ಲಾದೇಶದ ರಾಷ್ಟ್ರೀಯ ಪಕ್ಷವು ನಾಲ್ಕು ಸ್ಥಾನಗಳನ್ನು ಗೆದ್ದಿದೆ. ಪಕ್ಷೇತರರು 62 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಇತರರು ಒಂದು ಸ್ಥಾನವನ್ನು ಗೆದ್ದಿದ್ದಾರೆ.




