February 3, 2026

ಸುಳ್ಯ: ಅಯೋಧ್ಯೆ ಕಾರ್ಯಕ್ರಮಕ್ಕೆ ಶುಭಕೋರಿ ಅಳವಡಿಸಿದ್ದ ಫ್ಲೆಕ್ಸ್ ಗೆ ಹಾನಿ: ಪ್ರಕರಣನ್ನು ಭೇದಿಸಿದ ಪೊಲೀಸರು

0
image_editor_output_image1461294235-1704693283579.jpg

ಸುಳ್ಯ: ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ಆಟೋ ರಿಕ್ಷಾ ಸಂಘದ ವತಿಯಿಂದ ಜಾತ್ರೋತ್ಸವ ಹಾಗೂ ಅಯೋಧ್ಯೆ ಶ್ರೀರಾಮ ಮಂದಿರದ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಶುಭಕೋರಿ ಅಳವಡಿಸಿದ್ದ ಫ್ಲೆಕ್ಸ್ ಹರಿದಿರುವ ಘಟನೆ ನಡೆದಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಜ.5ರಂದು ಮಧ್ಯರಾತ್ರಿ ಮಾನಸಿಕ ಅಸ್ವಸ್ಥನಂತೆ ತೋರುವ ವಯಸ್ಸಾದ ವ್ಯಕ್ತಿಯೋರ್ವ ಬ್ಯಾನರ್ ಹರಿದು ತನ್ನ ಕೈಯಲ್ಲಿ ಹಿಡಿದುಕೊಂಡು, ಸುಳ್ಯ ಪೇಟೆಯಲ್ಲಿ ಸುತ್ತಾಡಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿರುವ ದೃಶ್ಯವೊಂದರಲ್ಲಿ ಕಂಡುಬಂದಿದೆ. ಈ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ ಎಂದು ಹೇಳಿದ್ದಾರೆ.

ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಸುಳ್ಯ ನಗರದ ಸುಮಾರು 40 ಸಿಸಿಟಿವಿ ಕ್ಯಾಮರಾಗಳ ಪೂಟೇಜ್ಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಜ.5ರಂದು ಮಧ್ಯರಾತ್ರಿ ಮಾನಸಿಕ ಅಸ್ವಸ್ಥನಂತೆ ಕಂಡುಬರುತ್ತಿರುವ ಅಪರಿಚಿತ ವಯಸ್ಸಾದ ವ್ಯಕ್ತಿಯೋರ್ವ ಈ ಫ್ಲೆಕ್ಸ್ ಅನ್ನು ಮಧ್ಯಭಾಗದಿಂದ ಹರಿದು ಕೈಯಲ್ಲಿ ಹಿಡಿದುಕೊಂಡು ಸುಳ್ಯ ಪೇಟೆಯಲ್ಲಿ ಸುತ್ತಾಡಿರುವುದು ಪತ್ತೆಯಾಗಿದೆ ಪೊಲೀಸ್ ಪ್ರಕಟನೆ ತಿಳಿಸಿದೆ.

ಮಾನಸಿಕ ಅಸ್ವಸ್ಥನಂತೆ ತೋರುವ ವ್ಯಕ್ತಿಯೋರ್ವ ಬ್ಯಾನರ್ ಹರಿದಿರುವುದನ್ನು ಸಿಸಿಟಿವಿ ಕ್ಯಾಮರಾದ ದೃಶ್ಯಾವಳಿಯ ಆಧಾರದಲ್ಲಿ ಪತ್ತೆಹಚ್ಚಲಾಗಿದೆ ಎಂದು ಪೊಲೀಸ್ ಪ್ರಕಟನೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!