ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ವಿರುದ್ಧ ಲೈಂಗಿಕ ದೌರ್ಜನ್ಯ: ಪ್ರಕರಣ ದಾಖಲು
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ವಿರುದ್ಧ ಮಹಿಳಾ ಉದ್ಯೋಗಿ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ.
ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಮಹಿಳೆ ಮೂಡಾ ಆಯುಕ್ತ ಮನ್ಸೂರು ಅಲಿ ವಿರುದ್ಧ ಲೈಂಗಿಕ, ಮಾನಸಿಕ, ಹಾಗೂ ದೈಹಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ, ಜ. 6 ರಂದು ಉರ್ವ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
ಐಪಿಸಿ ಸೆಕ್ಷನ್ 354, 354ಎ ಪ್ರಕಾರ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.




