September 20, 2024

ಹೆಲ್ಮೆಟ್‌ನಿಂದ ಹೊಡೆದು ಪತ್ನಿಯ ಕೊಲೆ: ಅಪಘಾತದ ನಾಟಕವಾಡಿದ್ದ ಪತಿಯ ಬಂಧನ

0

ದಾವಣಗೆರೆ: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಹೆಲ್ಮೆಟ್‌ನಿಂದ ಹೊಡೆದು ಕೊಂದು ಬಳಿಕ ಅಪಘಾತದ ನಾಟಕವಾಡಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಮೃತಳನ್ನು ಯಶೋದಾ ಎಂದು ಗುರುತಿಸಲಾಗಿದ್ದು, ಈಕೆ 3 ತಿಂಗಳ ಗರ್ಭಿಯಾಗಿದ್ದರು. ಇದೇ ತಿಂಗಳ 4 ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿಗ ನುಗ್ಗಿಹಳ್ಳಿ ಕ್ರಾಸ್ ಬಳಿ ಈ ಘಟನೆ ನಡೆದಿದೆ.

ಚನ್ನಗಿರಿ ತಾಲೂಕಿನ ಸಾರಥಿ ಹೊಸೂರು ಗ್ರಾಮದ ನಿವಾಸಿ ಯಶೋದಾ, ನರಗನಹಳ್ಳಿ ಗ್ರಾಮದ ತಿಪ್ಪೇಶ್ (28) ಎಂಬಾತನನ್ನ ಪ್ರೀತಿಸಿ ಆರು ತಿಂಗಳ ಹಿಂದೆ ಮದುವೆ ಆಗಿದ್ದರು.

ಅಂತೆಯೇ ಜನವರಿ 4 ರಂದು ಪತಿ ಜೊತೆ ಯಶೋದಾ ತವರಿಗೆ ಬಂದಿದ್ದರು. ತವರು ಮನೆಯಿಂದ ವಾಪಸ್ ಹೋಗುವಾಗ ಬೈಕ್ ಅಪಘಾತವಾಗಿ ಯಶೋದಾ ಸಾವನ್ನಪ್ಪಿದ್ದಾಳೆ ಎಂದು ಸಂಬಂಧಿಕರಿಗೆ ಪತಿ ತಿಪ್ಪೇಶ್ ಮಾಹಿತಿ‌ ನೀಡಿದ್ದ.

Leave a Reply

Your email address will not be published. Required fields are marked *

error: Content is protected !!