ತಲೆಗೆ ಚೆಂಡು ಬಡಿದು ಆಟಗಾರ ಮೃತ್ಯು
ಮುಂಬೈ: ಕ್ರಿಕೆಟ್ ಆಡುತ್ತಿದ್ದಾಗ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಮುಂಬೈನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಭಯಂದರ್‌ನ 52 ವರ್ಷದ ಉದ್ಯಮಿ ಜಯೇಶ್ ಚುನ್ನಿಲಾಲ್ ಸಾವ್ಲಾ ಎಂದು ಗುರುತಿಸಲಾಗಿದೆ. ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಸಾವ್ಲಾ ಅವರ ತಲೆಗೆ ಚೆಂಡು ಬಡಿದಿದ್ದು, ಇದರಿಂದಾಗಿ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿಗಳ ಮಾಹಿತಿ ಪ್ರಕಾರ, ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕಚ್ಚಿ ಸಮುದಾಯವರು ಮಾಟುಂಗಾ ಜಿಮ್ಖಾನಾ ದಾಡ್ಕರ್ ಮೈದಾನದಲ್ಲಿ ಹಿರಿಯರ ಟಿ20 ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿದ್ದರು. ಈ ಟೂರ್ನಿಯಲ್ಲಿ ಜಯೇಶ್ ಚುನ್ನಿಲಾಲ್ ಸಾವ್ಲಾ ಕೂಡ ಭಾಗವಹಿಸಿದ್ದರು.





