May 17, 2026

ಜ.31ರಿಂದ ಸಂಸತ್‌ ಬಜೆಟ್‌ ಅಧಿವೇಶನ ಪ್ರಾರಂಭ: ಫೆ.1ಕ್ಕೆ ಕೇಂದ್ರ ಬಜೆಟ್ ಮಂಡನೆ

0
IMG-20240111-WA0032.jpg

ನವದೆಹಲಿ: ಜನವರಿ 31ರಿಂದ ಸಂಸತ್‌ ಬಜೆಟ್‌ ಅಧಿವೇಶನ ಆರಂಭಗೊಳ್ಳಲಿದ್ದು, ಫೆ.1ಕ್ಕೆ ಕೇಂದ್ರ ಬಜೆಟ್ ನಡೆಯಲಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಸರ್ಕಾರದ ಐದು ವರ್ಷಗಳ ಸಾಧನೆ ಸೇರಿದಂತೆ ಪ್ರಮುಖ ಅಂಶಗಳ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡುವ ಮೂಲಕ ಸಂಸತ್‌ ಬಜೆಟ್‌ ಅಧಿವೇಶನ ಆರಂಭಗೊಳ್ಳಲಿದೆ ಎಂದು ವರದಿಯಾಗಿದೆ.

ಇನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಫೆಬ್ರವರಿ 1ರಂದು ಪ್ರಸಕ್ತ ಸಾಲಿನ ಮಧ್ಯಂತರ ಬಜೆಟ್‌ ಅನ್ನು ಮಂಡಿಸಲು ಸಿದ್ಧತೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!