ಬೆಳ್ತಂಗಡಿ: ಕಾಲೇಜ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಮಾರಿಗುಡಿ ಹೊಸಮನೆ ಎಂಬಲ್ಲಿ ನಡೆದಿದೆ.
ಮಡಂತ್ಯಾರು ಮಾರಿಗುಡಿ ಹೊಸಮನೆ ನಿವಾಸಿ, ಉದ್ಯಮಿ ಪ್ರಶಾಂತ್ ಬಾಳಿಗ ಎಂಬವರ ಪುತ್ರ ಪ್ರತೀಕ್ (19) ಆತ್ಮಹತ್ಯೆ ಮಾಡಿಕೊಂಡ ಯುವಕ.
ಪ್ರತೀಕ್ ಮನೆಯ ರೂಮ್ ನಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಪ್ರತೀಕ್ ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.





