March 28, 2026

ಆಟವಾಡುತ್ತಿದ್ದಾಗ ನಿಂಬೆಹಣ್ಣು ನುಂಗಿ 9 ತಿಂಗಳ ಮಗು ಮೃತ್ಯು

0
image_editor_output_image-1859065281-1705036383151.jpg

ಆಂಧ್ರ ಪ್ರದೇಶ: ಮನೆಯಲ್ಲಿ ಆಟವಾಡುತ್ತಾ ಮಗುವೊಂದು ನಿಂಬೆಹಣ್ಣು ನುಂಗಿದ ಪರಿಣಾಮ ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ಆಂಧ್ರಪ್ರದೇಶದ ಅನಂತಪುರಂನಲ್ಲಿ ನಡೆದಿದೆ.

ಅನಂತಪುರ ಜಿಲ್ಲೆಯ ಪೆದ್ದವಡುಗೂರು ಮಂಡಲ ಮಲ್ಲೇನಿಪಲ್ಲಿಯದ ಸಾಕಿದೀಪ ಮತ್ತು ಗೋವಿಂದರಾಜ್ ದಂಪತಿಯ ಜಸ್ವಿತಾ (9 ತಿಂಗಳು) ಮೃತ ಮಗು.

ಎಂದಿನಂತೆ ಮನೆಯಲ್ಲಿ ಆಡುತ್ತಾ ಮನೆಯಲ್ಲಿತ್ತು. ತಾಯಿ ಮಗುವನ್ನು ನೋಡುತ್ತಾ,ಮತ್ತೊಂದು ಕಡೆ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ ಮಗು ಜಗಲಿಯಲ್ಲಿದ್ದ ನಿಂಬೆಹಣ್ಣನ್ನು ಹಿಡಿದು ನುಂಗಿದೆ. ಆ ಬಳಿಕ ಮಗುವಿನ ಉಸಿರಾಟದಲ್ಲಿ ತೊಂದರೆ ಆಗಿದೆ. ಕೂಡಲೇ ತಾಯಿ ಗಂಟಲಿನಲ್ಲಿ ಸಿಲುಕಿದ್ದ ನಿಂಬೆಹಣ್ಣನ್ನು ತೆಗೆಯಲು ಯತ್ನಿಸಿ, ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಆಸ್ಪತ್ರೆಯಲ್ಲಿ ವೈದ್ಯರು ಪರಿಕ್ಷೀಸಿದ ಬಳಿಕ ಆದಾಗಲೇ ಮಗು ಮೃತಪಟ್ಟಿದೆ ಎಂದಿದ್ದಾರೆ. ಸಾಕಿದೀಪ ಮತ್ತು ಗೋವಿಂದರಾಜ್ ದಂಪತಿಗೆ ಮದುವೆಯಾದ 7 ವರ್ಷದ ಬಳಿಕ ಮಗು ಜನಿಸಿತ್ತು.

Leave a Reply

Your email address will not be published. Required fields are marked *

error: Content is protected !!