February 4, 2026

ಮನೆಯ ಮುಂದೆ ಆಟವಾಡುತ್ತಿದ್ದಾಗ ಜೆಸಿಬಿ ಹರಿದು ಬಾಲಕ ಸ್ಥಳದಲ್ಲೇ ಸಾವು

0
image_editor_output_image765547306-1705036580319.jpg

ಮನೆಯ ಮುಂದೆ ಆಟವಾಡುತ್ತಿದ್ದ 5 ವರ್ಷದ ಬಾಲಕನ ಮೇಲೆ ಜೆಸಿಬಿ ಹರಿದು ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದ ಶಬ್ಬೀರ್ ನಗರದಲ್ಲಿ ನಡೆದಿದೆ.

ಮನ್ವಿತ್ ಮಂಜುನಾಥ್ ಏರಿಮನಿ (5) ಮೃತ ಬಾಲಕ. ಬಾಲಕ ತನ್ನ ನಿವಾಸದ ಮುಂದೆ ಆಟವಾಡುತ್ತಿದ್ದ ವೇಳೆ ದುರಂತ ಸಂಭವಿಸಿದೆ.

ಪಟ್ಟಣದ ಶಬ್ಬೀರ್ ನಗರದಿಂದ ಶಿರಹಟ್ಟಿ ಮಾಗಡಿ ಕಡೆಗೆ ತೆರಳುತ್ತಿದ್ದ ಜೆಸಿಬಿ ಚಾಲಕನ ನಿಯಂತ್ರಣ ತಪ್ಪಿ ಬಾಲಕನ ಮೇಲೆ ಹರಿದಿದೆ. ಘಟನೆಯಲ್ಲಿ ಪುಟ್ಟ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಜೆಸಿಬಿ ಚಾಲಕನ ಅಜಾಗರುಕತೆಯಿಂದಲೇ ಈ ಅವಘಡ ಸಂಭವಿಸಿದ್ದು, 5 ವರ್ಷದ ಬಾಲಕ ಜೀವ ಕಳೆದುಕೊಂಡಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಘಟನೆ ಸಂಬಂಧ ಜೆಸಿಬಿ ಚಾಲಕನ ವಿರುದ್ಧ ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!