ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕ ಹಣಮೇಗೌಡನ ವಿರುದ್ಧ FIR ದಾಖಲು
ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮುಕ ಶಿಕ್ಷಕ ಹಣಮೇಗೌಡನ ವಿರುದ್ಧ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆ ಅಡಿ ಕೇಸ್ ದಾಖಲಾಗಿದೆ.
ಕಾಮುಕ ಶಿಕ್ಷಕ ಹಣಮೇಗೌಡ ಎರಡ್ಮೂರು ವರ್ಷಗಳಿಂದ ವಿದ್ಯಾರ್ಥಿಯರಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ. ಈಗಾಗಲೇ ಅನುಚಿತ ವರ್ತನೆ ಆರೋಪದಡಿ ಶಿಕ್ಷಕ ಹಣಮೇಗೌಡನನ್ನು ಜಿಲ್ಲಾ ಪಂಚಾಯತಿ ಸಿಇಓ ಗರೀಮಾ ಪನ್ವಾರ್ ಅಮಾನತು ಮಾಡಿ ಆದೇಶಿಸಿದ್ರು. ಅಲ್ಲದೇ ಇದೇ ಘಟನೆಗೆ ಸಂಬಂಧಿಸಿದಂತೆ ನಾಲ್ಕು ಜನ ಶಿಕ್ಷಕ ಇಲಾಖೆ ಅಧಿಕಾರಿಗಳ ತಂಡದಿಂದ ಶಾಲೆಗೆ ಭೇಟಿ ವಿದ್ಯಾರ್ಥಿನಿಯರಿಂದ ಮಾಹಿತಿ ಸಂಗ್ರಹಿಸಲಾಗಿತ್ತು.





