ಪ್ರೀತಿಸುವಂತೆ ಕಿರುಕುಳ: ಯುವತಿ ನೇಣು ಬಿಗಿದು ಆತ್ಮಹತ್ಯೆ
ಹಾಸನ: ಪ್ರೀತಿಸುವಂತೆ ಯುವತಿಯೊಬ್ಬಳಿಗೆ ನಿರಂತರ ಕಿರುಕುಳ ನೀಡಿ ಜನರ ಎದುರೇ ಯುವಕನೊಬ್ಬ ಅವಮಾನ ಮಾಡಿದ ಪರಿಣಾಮ ಮನನೊಂದು ಯುವತಿ ನೇಣಿಗೆ ಶರಣಾದ ಘಟನೆ ಬೇಲೂರಿನ ನಿಡಗೂಡು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಜಯಣ್ಣ ಎಂಬವರ ಪುತ್ರಿ ಸಂಗೀತಾ (21) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಅದೇ ಗ್ರಾಮದ ಹೊನ್ನಯ್ಯ ಎಂಬವರ ಪುತ್ರ ಶಿವು ಎಂಬಾತ ಸಂಗೀತಾಳನ್ನು ಪ್ರೀತಿಸುತ್ತಿರುವುದಾಗಿ ಹೇಳಿಕೊಂಡು ಓಡಾಡುತ್ತಿದ್ದ.
ಅಲ್ಲದೇ ತನಗೆ ಯುವತಿಯನ್ನು ಮದುವೆ ಮಾಡಿಕೊಡುವಂತೆ ಸಂಗೀತಾ ಪೋಷಕರಲ್ಲಿ ಕೇಳಿದ್ದ. ಇದಕ್ಕೆ ಸಂಗೀತಾ ಮನೆಯವರು ಈಗಲೇ ಮದುವೆ ಮಾಡುವುದಿಲ್ಲ ಎಂದು ತಿಳಿಸಿದ್ದರು. ಇಷ್ಟಾದರೂ ಶಿವು, ಸಂಗೀತಾಳಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ಎಂದು ತಿಳಿದುಬಂದಿದೆ.





