March 20, 2026

ಕಡಬ: ಆಸ್ಪತ್ರೆಗೆ ದಾಖಲಾಗಿದ್ದ ಕಾಲೇಜು ವಿದ್ಯಾರ್ಥಿನಿ ಸಾವು

0
image_editor_output_image-1718058909-1705122113489.jpg

ಕಡಬ: ಕಾಲೇಜು ವಿದ್ಯಾರ್ಥಿನಿಯೋರ್ವಳು ತೀವ್ರ ಅನಾರೋಗ್ಯಕ್ಕೆ ಒಳಗಾಗಿ ಮೃತಪಟ್ಟ ಘಟನೆ ಕಡಬ ಸಮೀಪದ ಎಡಮಂಗಲ ಎಂಬಲ್ಲಿ ನಡೆದಿದೆ.

ಮೃತ ಯುವತಿಯನ್ನು ಸುಬ್ರಹ್ಮಣ್ಯ ಪದವಿ ಕಾಲೇಜಿನ ಪ್ರಥಮ ಬಿ.ಕಾಂ. ವಿದ್ಯಾರ್ಥಿನಿ, ಎಡಮಂಗಲ ನಿವಾಸಿ ತೃಪ್ತಿ ಎಂದು ಗುರುತಿಸಲಾಗಿದೆ.

ಎರಡು ದಿನಗಳಿಂದ ಅನಾರೋಗ್ಯದಿಂದಿದ್ದ ಈಕೆಯನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರದಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!