ಪ್ರೀಯಕರನ ಜೊತೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ
ಬೆಂಗಳೂರು: ಶಬರಿಮಲೆ ಅಯ್ಯಪ್ಪನ ದರ್ಶನ ಮುಗಿಸಿ ಮನೆಗೆ ಹೋಗದೇ ಅಯ್ಯಪ್ಪನ ಸನ್ನಿದಿಯಿಂದ ನೇರವಾಗಿ ಪ್ರೇಯಸಿಯನ್ನ ನೋಡಲು ಬೆಂಗಳೂರಿಗೆ ಬಂದಿದ್ದ ಪ್ರೀಯಕರ, ಇದೀಗ ಪ್ರೇಯಸಿಯೊಂದಿಗೆ ಜೈಲುಪಾಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಶಬರಿಮಲೆ ಅಯ್ಯಪ್ಪನ ದರ್ಶನ ಮುಗಿಸಿ ಬಂದಿದ್ದ ಪ್ರಿಯಕರನೊಂದಿಗೆ ಸರಸವಾಡಲು ಪತಿ ಅಡ್ಡಿಯಾಗಿದ್ದಾನೆ.
ಇದರಿಂದ ಆಕ್ರೋಶಗೊಂಡ ಪತ್ನಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆ ಮಾಡಿಸಿದ್ದಾಳೆ. ಪತಿ ವೆಂಕಟನಾಯ್ಕ್ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿಸಿದ್ದಾಳೆ.
ಬಳಿಕ ಪೊಲೀಸ್ ಸಹಾಯವಾಣಿ 112ಗೆ ಕರೆ ಮಾಡಿ ಬಾತ್ ರೂಂನಲ್ಲಿ ನನ್ನ ಗಂಡ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ ಅಂತ ಪೊಲೀಸರ ಮುಂದೆ ಹೈಡ್ರಾಮಾ ಮಾಡಿದ್ದಾಳೆ.





