March 20, 2026

ಚಿಕ್ಕಮಗಳೂರು: ಆಸ್ಪತ್ರೆಯಿಂದ ತಪ್ಪಿಸಿಕೊಂಡ ಆರೋಪಿ ಪೂರ್ಣೇಶ್

0
image_editor_output_image899036481-1705129309003.jpg

ಚಿಕ್ಕಮಗಳೂರು: ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಯೋರ್ವ ತಪ್ಪಿಸಿಕೊಂಡಿರುವ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ.

ಕೊಲೆ ಯತ್ನ ಪ್ರಕರಣದ ಆರೋಪಿ ಪೂರ್ಣೇಶ್ ಎಂಬಾತ ತಲೆ ಮರೆಸಿಕೊಂಡು ಓಡಾಡುತ್ತಿದ್ದ. ಬಾಳೆಹೊನ್ನೂರು ಸಮೀಪ ಮನೆಯೊಂದರಲ್ಲಿ ಮಲಗಿದ್ದ ಖಚಿತ ಮಾಹಿತಿ ಮೇರೆಗೆ ಬಾಳೆಹೊನ್ನೂರು ಪೊಲೀಸರು ಬಂಧಿಸಲು ಮುಂದಾದಾಗ ಆಯುಧದಿಂದ ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದ. ಈ ವೇಳೆ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿ ಆತನನ್ನು ಬಂಧಿಸಿದ್ದರು.

ಆರೋಪಿ ಪೂರ್ಣೇಶ್ ಕಾಲಿಗೆ ಗುಂಡು ತಗುಲಿ ತೀವ್ರ ಅಸ್ವಸ್ಥಗೊಂಡಿದ್ದ. ಆತನನ್ನು ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆರೋಪಿ ಪೂರ್ಣೇಶ್ ಚೇತರಿಸಿಕೊಂಡಿದ್ದ, ಪೂರ್ಣ ಗುಣಮುಖವಾಗದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಇರಿಸಲಾಗಿತ್ತು. ಶನಿವಾರ ಬೆಳಗಿನ ಜಾವ ಪೂರ್ಣೇಶ್ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದಾನೆ.

Leave a Reply

Your email address will not be published. Required fields are marked *

error: Content is protected !!