March 20, 2026

ಬೆಳ್ತಂಗಡಿ: ರಸ್ತೆ ಬದಿಯಲ್ಲಿ ನಿಂತಿದ್ದ ಒಮ್ನಿ ವಾಹನಕ್ಕೆ ವೇಗವಾಗಿ ಬಂದ ವ್ಯಾಗನರ್ ಕಾರು ಢಿಕ್ಕಿ

0
image_editor_output_image196243110-1705142334542.jpg

ಬೆಳ್ತಂಗಡಿ: ರಸ್ತೆ ಬದಿಯಲ್ಲಿ ನಿಂತಿದ್ದ ಒಮ್ನಿ ವಾಹನಕ್ಕೆ ವೇಗವಾಗಿ ಬಂದ ವ್ಯಾಗನರ್ ಕಾರು ಡಿಕ್ಕಿ ಹೊಡೆದ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಅರಮಲೆ ಬೆಟ್ಟದ ಸಮೀಪದ ರಸ್ತೆಯಲ್ಲಿ ಸಂಭವಿಸಿದೆ.

ಅಪಘಾತ ನಡೆಯುವ ವೇಳೆ ಒಮ್ನಿ ವಾಹನದ ಪಕ್ಕದಲ್ಲೇ ರಸ್ತೆ ದಾಟಲು ಕಾಯುತ್ತಿದ್ದ ಅಂಜಲಿ ಶೆಣೈ ಎಂಬವರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಂಜಲಿ ಶೈಣೈ ಮಾಜಿ ತಾಲೂಕು ಪಂಚಾಯತ್ ಸದಸ್ಯ ಗೋಪಿನಾಥ ನಾಯಕ್ ಅವರ ಪತ್ನಿ ಎಂದು ಗುರುತಿಸಲಾಗಿದೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಡಿಕ್ಕಿ ಹೊಡೆದ ಕಾರು ನಿಲ್ಲಿಸದೇ ಚಲಾಯಿಸಿಕೊಂಡು ಹೋಗಿದ್ದು, ಬಳಿಕ ಚಾಲಕ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ.

ಸಮೀಪದಲ್ಲಿ ಫೈರ್‌ ಸ್ಟೇಷನ್ ಇರುವ ಕಾರಣ ರಸ್ತೆ ವಿಭಾಜಕ ತೆರವು ಮಾಡಿದ್ದು ಹಾಗೂ ವಾಣಿಜ್ಯ ಕಟ್ಟಡಗಳ ವಾಹನಗಳು ರಸ್ತೆಯಲ್ಲೇ ನಿಲ್ಲಿಸುವುದು ಕೂಡಾ ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ .

ಸದ್ಯ ಅಪಘಾತದ ಬಗ್ಗೆ ಬೆಳ್ತಂಗಡಿ ಸಂಚಾರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!