ಕೃಷಿ ವಿಶ್ವವಿದ್ಯಾಲಯದ ನಿರ್ದೇಶಕ ಕುಸಿದುಬಿದ್ದು ಮೃತ್ಯು
ತಿರುವನಂತಪುರಂ: ದೂರದರ್ಶನ ನೇರ ಪ್ರಸಾರ ಕಾರ್ಯಕ್ರಮದ ವೇಳೆ ಕೃಷಿ ವಿಶ್ವವಿದ್ಯಾಲಯದ ನಿರ್ದೇಶಕರಾದ ಡಾ. ಅನಿ. ಎಸ್. ದಾಸ್ (59) ಅವರು ಕುಸಿದುಬಿದ್ದು ಮೃತಪಟ್ಟಿದ್ದಾರೆ.
ಶುಕ್ರವಾರ ಕೇರಳದ ತಿರುವನಂತಪುರಂನಲ್ಲಿರುವ ದೂರದರ್ಶನ ವಾಹಿನಿಯಲ್ಲಿ ಕೃಷಿ ದರ್ಶನ ಕಾರ್ಯಕ್ರಮದ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಘಟನೆ ನಡೆದ ಕೂಡಲೇ ಅವರನ್ನು ತಿರುವನಂತಪುರಂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟೋತ್ತಿಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.





