ಮಂಗಳೂರು: 50.93 ಲ.ರೂ. ಮೌಲ್ಯದ ಚಿನ್ನ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು
ಮಂಗಳೂರು: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 50.93 ಲ.ರೂ. ಮೌಲ್ಯದ ಚಿನ್ನವನ್ನು ಶುಕ್ರವಾರ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ.
ಅಬುದಾಭಿ ಮತ್ತು ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಇಬ್ಬರನ್ನು ತಪಾಸಣೆಗೊಳಪಡಿಸಿದಾಗ 50,93,750 ರೂ. ಮೌಲ್ಯದ 24 ಕ್ಯಾರೆಟ್ ಪರಿಶುದ್ಧತೆಯ ಒಟ್ಟು 815 ಗ್ರಾಂ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಅಂಡಾಕಾರದ ಕವರ್‌ನೊಳಗೆ ಹಾಕಿ ಗುದದ್ವಾರದಲ್ಲಿಟ್ಟು ಹಾಗೂ ಚಾಕೊಲೆಟ್‌ನ ಬಾಕ್ಸ್‌ನಲ್ಲಿಟ್ಟು ಸಾಗಿಸುತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ




