February 3, 2026

ಒಮಿಕ್ರಾನ್ ಸೋಂಕು ಭಯ:
ಪತ್ನಿ, ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ ಮೆಡಿಕಲ್ ಕಾಲೇಜಿನ ಪ್ರೊಫೆಸರ್

0
image_editor_output_image-1566638106-1638604559680.jpg

ಕಾನ್ಪುರ್: ಕೋವಿಡ್ ನ ಹೊಸ ರೂಪಾಂತರಿ ತಳಿ ಒಮಿಕ್ರಾನ್ ಸೋಂಕಿಗೆ ಹೆದರಿ ಕಾನ್ಪುರ್ ಮೆಡಿಕಲ್ ಕಾಲೇಜಿನ ವಿಧಿವಿಜ್ಞಾನ ಹಿರಿಯ ಪ್ರೊಫೆಸರ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ಪರಾರಿಯಾಗಿರುವ ಆಘಾತಕಾರಿ ಘಟನೆ ಉತ್ತರಪ್ರದೇಶದಲ್ಲಿ ಶುಕ್ರವಾರ ನಡೆದಿದೆ

ಒಮಿಕ್ರಾನ್ ಗೆ ಹೆದರಿ ಪತ್ನಿ, ಮಕ್ಕಳನ್ನು ಕೊಂದು ಮನೆಯಿಂದ ಪರಾರಿಯಾಗುವ ಮೊದಲು ತನ್ನ ಸಹೋದರನಿಗೆ ವಾಟ್ಸಪ್ ಮೂಲಕ ವಿಷಯ ತಿಳಿಸಿರುವುದಾಗಿ ವರದಿ ವಿವರಿಸಿದೆ. ಘಟನಾ ಸ್ಥಳದಲ್ಲಿ ಸುಮಾರು 10 ಪುಟಗಳ ಸೂಸೈಡ್ ನೋಟ್ ಸಿಕ್ಕಿದ್ದು, ಸಹೋದರನಿಗೆ ಕಳುಹಿಸಿರುವ ವಾಟ್ಸಪ್ ಸಂದೇಶದಲ್ಲಿ ತಮ್ಮ ಕುಟುಂಬ ಗಂಭೀರ ಮಾನಸಿಕ ಒತ್ತಡದಲ್ಲಿರುವುದಾಗಿ ತಿಳಿಸಿರುವುದಾಗಿ ವರದಿ ವಿವರಿಸಿದೆ.

ಈ ಸೋಂಕಿನಿಂದ ತಪ್ಪಿಸಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ಹೀಗಾಗಿ ನಾನು ನನ್ನ ಪತ್ನಿ, ಮಕ್ಕಳನ್ನು ಹತ್ಯೆಗೈದಿದ್ದೇನೆ. ಇದಕ್ಕೆ ಬೇರೆ ಯಾರೂ ಹೊಣೆಗಾರರಲ್ಲ ಎಂದು ಪ್ರೊಫೆಸರ್ ಸುಶೀಲ್ ಸಿಂಗ್ ಡೆತ್ ನೋಟ್ ನಲ್ಲಿ ಬರೆದಿರುವುದಾಗಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!