ಮಂಗಳೂರು: ಜಿ.ಆರ್.ಮೆಡಿಕಲ್ ಕಾಲೇಜಿನ ಅನುಮತಿ ರದ್ದು ಎತ್ತಿಹಿಡಿದ ಹೈಕೋರ್ಟ್
ಬೆಂಗಳೂರು: ಸೌಲಭ್ಯಗಳ ಕೊರತೆ ಹಿನ್ನೆಲೆಯಲ್ಲಿ ಮಂಗಳೂರಿನ ಜಿ.ಆರ್. ವೈದ್ಯಕೀಯ ಕಾಲೇಜಿಗೆ 2022-23ನೇ ಸಾಲಿನ ಎಂಬಿಬಿಎಸ್ ಕೋರ್ಸ್ ನಡೆಸಲು ನೀಡಿದ್ದ ಅನುಮತಿಯನ್ನು ರದ್ದುಪಡಿಸಿದ್ದ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‍ಎಂಸಿ) ನಿರ್ಧಾರದಲ್ಲಿ ಮಧ್ಯಪ್ರವೇಶ ಮಾಡಲು ಹೈಕೋರ್ಟ್ ನಿರಾಕರಿಸಿದೆ.
ಅಲ್ಲದೆ, 2021-22ನೇ ಸಾಲಿನಲ್ಲಿ ಕಾಲೇಜಿಗೆ ಪ್ರವೇಶ ಪಡೆದು ಎಂಬಿಬಿಎಸ್ ಕೋರ್ಸ್ ಮುಂದುವರೆಸುತ್ತಿದ್ದ 150 ಮಂದಿ ವಿದ್ಯಾರ್ಥಿಗಳನ್ನು ರಾಜ್ಯದ ಇತರೆ ಕಾಲೇಜುಗಳಿಗೆ ಸ್ಥಳಾಂತರಿಸಲು ಸೂಚಿಸಿದ್ದ ಎನ್‍ಎಂಸಿ ನಿರ್ಧಾರವನ್ನು ಎತ್ತಿ ಹಿಡಿದಿದೆ. ಕಾಲೇಜಿಗೆ ಅನುಮತಿ ಮುಂದುವರೆಸುವುದು ಮತ್ತು ವಿದ್ಯಾರ್ಥಿಗಳನ್ನು ಮತ್ತೊಂದು ಕಾಲೇಜಿಗೆ ಸ್ಥಳಾಂತರಿಸುವಂತೆ ಸೂಚಿಸಿದ್ದ ಎನ್‍ಎಂಸಿ ಹಾಗೂ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಕಾಲೇಜು ಆಡಳಿತ ಮಂಡಳಿ ಹೈಕೋರ್ಟ್ ಮೆಟ್ಟಿಲೇರಿತ್ತು.





