March 20, 2026

ಬೆಳ್ತಂಗಡಿ: ಕಾಲು ಜಾರಿ ತೆರೆದ ಬಾವಿಗೆ ಬಿದ್ದು ಬಾಲಕ ಮೃತ್ಯು

0
IMG-20240115-WA0021.jpg

ಬೆಳ್ತಂಗಡಿ: ಮಕ್ಕಳ ಜೊತೆ ಆಟವಾಡುತ್ತಿದ್ದ ಬಾಲಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ಇಂದು ಸಂಜೆ ನಡೆದಿದೆ.

ಪಣಕಜೆ ನಿವಾಸಿ ಮಹಮ್ಮದ್ ಅನಾನ್ (7) ಮೃತ ದುರ್ದೈವಿ.

ಇಂದು ಶಾಲೆಗೆ ರಜೆ ಇದ್ದ ಹಿನ್ನೆಲೆ ಪಕ್ಕದ ಮನೆಯ ಮಕ್ಕಳೊಂದಿಗೆ ಅನಾನ್ ಆಟವಾಡುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮಕ್ಕಳು ತೆರೆದ ಬಾವಿಯ ಹತ್ತಿರ ಆಟವಾಡುತ್ತಿದ್ದರು, ಈ ವೇಳೆ ಅನಾನ್ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾನೆ ಎಂದು ತಿಳಿದುಬಂದಿದೆ. ತಕ್ಷಣ ಸ್ಥಳೀಯರು ಅನಾನ್ ನನ್ನು ಬಾಲಕನನ್ನು ಮೇಲಕ್ಕೆತ್ತಿದ್ದು, ಬೆಳ್ತಂಗಡಿಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆ ವೇಳೆಗಾಗಲೇ ಅನಾನ್ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪುಂಜಾಲಕಟ್ಟೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!