March 20, 2026

ಕರ್ನಾಟಕದಲ್ಲಿ ಇಂದು 61 ಜನರಿಗೆ ಕೊರೊನಾ ದೃಢ

0
IMG-20240115-WA0022.jpg

ಬೆಂಗಳೂರು: ಕರ್ನಾಟಕದಲ್ಲಿ ಇಂದು 61 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 1.95 ರಷ್ಟಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 3,123 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, 863 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. 156 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಇನ್ನು ಮೈಸೂರು 8, ಬೆಳಗಾವಿ 5, ಉತ್ತರ ಕನ್ನಡ ಜಿಲ್ಲೆಯಲ್ಲಿ 5, ಬಳ್ಳಾರಿ 2, ಚಾಮರಾಜನಗರ 2, ಶಿವಮೊಗ್ಗ 2, ವಿಜಯನಗರ 2, ಬಾಗಲಕೋಟೆ, ಚಿಕ್ಕಬಳ್ಳಾಪುರ, ಧಾರವಾಡ, ಗದಗ, ಹಾಸನ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿವೆ.

Leave a Reply

Your email address will not be published. Required fields are marked *

error: Content is protected !!