March 20, 2026

ಕಾಸರಗೋಡು: ಶಾಲಾ ವಾಹನ-ಆಂಬ್ಯುಲೆನ್ಸ್ ನಡುವೆ ಅಪಘಾತ: ರೋಗಿ ಮೃತ್ಯು: ವಿದ್ಯಾರ್ಥಿಗಳ ಸಹಿತ 6 ಮಂದಿಗೆ ಗಾಯ
 

0
hr-070123-accident1.jpg


ಕಾಸರಗೋಡು: ಶಾಲಾ ವಾಹನ ಹಾಗೂ ಆಂಬ್ಯುಲೆನ್ಸ್ ನಡುವೆ ಉಂಟಾದ ಅಪಘಾತದಲ್ಲಿ ಆಂಬ್ಯುಲೆನ್ಸ್ ನಲ್ಲಿದ್ದ ರೋಗಿ ಮೃತ ಪಟ್ಟು ಐವರು ವಿದ್ಯಾರ್ಥಿಗಳು ಸೇರಿದಂತೆ ಆರು ಮಂದಿ ಗಾಯಗೊಂಡ ಘಟನೆ ಸೋಮವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಶಿರಿಯದಲ್ಲಿ ನಡೆದಿದೆ.

ಕಣ್ಣೂರಿನ ಸುರೇಶ್ ಕುಮಾರ್ ಮೃತ ಪಟ್ಟವರು.

ಶಿರಿಯದ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ವಾಹನ ಮತ್ತು ಕಣ್ಣೂರಿನಿಂದ ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದಾಗ ಅಪಘಾತ ನಡೆದಿದೆ.

ಇನ್ನು ಗಾಯಗೊಂಡ ವಿದ್ಯಾರ್ಥಿಗಳನ್ನು ಕುಂಬಳೆ ಮತ್ತು ಬಂದ್ಯೋಡಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಆಂಬ್ಯುಲೆನ್ಸ್ ನಲ್ಲಿದ್ದ ರೋಗಿಯನ್ನು ಮಂಗಳೂರಿಗೆ ಕೊಂಡೊಯ್ದರೂ ದಾರಿ ಮಧ್ಯೆ ಮೃತ ಪಟ್ಟರು.

ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!