March 20, 2026

ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ: ತಂದೆ, ಮಗು ಸ್ಥಳದಲ್ಲೇ ಸಾವು, ಮಹಿಳೆ ಗಂಭೀರ

0
image_editor_output_image-1882623965-1705386695898.jpg

ನೆಲಮಂಗಲ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಹಿಳೆ ಗಂಭೀರ ಗಾಯಗೊಂಡ ಘಟನೆ ನೆಲಮಂಗಲದಲ್ಲಿ ನಡೆದಿದೆ.

ನೆಲಮಂಗಲ ಬಳಿಯ ಅಡಕಿಮಾರನಹಳ್ಳಿಯ ಫ್ಲೈಓವರ್ ಮೇಲೆ ಅಪಘಾತ ಸಂಭವಿಸಿದೆ.

ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಡ, ಹೆಂಡತಿ ಹಾಗೂ ಮಗು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ.

ಭೀಕರ ಅಪಘಾತದ ಪರಿಣಾಮ ತಂದೆ ಹಾಗೂ ನಾಲ್ಕು ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಿಂದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!