KSRTC ಬಸ್ ಢಿಕ್ಕಿ: ಫುಡ್ ಡೆಲಿವರಿ ಬಾಯ್ ಮೃತ್ಯು
ಬೆಂಗಳೂರು: ಫುಡ್ ಡೆಲಿವರಿ ಮಾಡುತ್ತಿದ್ದ ವ್ಯಕ್ತಿಗೆ ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಫುಡ್ ಡೆಲಿವರಿ ಬಾಯ್ ಬಸವರಾಜು ರಾತ್ರಿ ವೇಳೆ ಮೈಸೂರು ರೋಡ್ ಕಡೆಗೆ ಫುಡ್ ಡೆಲಿವರಿ ಮಾಡಲು ತೆರಳುತ್ತಿದ್ದ ಸಂದರ್ಭ ಹಿಂಬದಿಯಿಂದ ರಭಸವಾಗಿ ಬಂದ ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ ಹೊಡೆದಿದೆ.
ಪರಿಣಾಮ ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಬ್ಯಾಟರಾಯನಪುರ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಚಾಲಕನನ್ನ ವಶಕ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.





