ಬಂಟ್ವಾಳ: ಸರಕಾರಿ ಬಸ್ ಬೈಕ್ ಗೆ ಡಿಕ್ಕಿ:
ಬೈಕ್ ಸವಾರ ಗಂಭೀರ
ಬಂಟ್ವಾಳ: ಸರಕಾರಿ ಬಸ್ ಡಿಕ್ಕಿಯಾಗಿ ಬೈಕ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಸಮೀಪದ ಮೂರ್ಜೆ ಎಂಬಲ್ಲಿ ನಡೆದಿದೆ
ಮೊಗಪೆ ಪುತ್ತಿಗೆ ನಿವಾಸಿ ನಂದಕುಮಾರ್ ಎಂಬಾತನಿಗೆ ಬಸ್ ಡಿಕ್ಕಿ ಹೊಡೆದಿದ್ದು, ಆತ ಗಂಭೀರವಾಗಿ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿದ್ದಾರೆ.





