ಕಡಬ: ರೈಲ್ವೇ ಇಲಾಖೆಯ ನಿವೃತ್ತ ಉದ್ಯೋಗಿ ಆತ್ಮಹತ್ಯೆ
ಕಡಬ: ರೈಲ್ವೇ ಇಲಾಖೆಯ ನಿವೃತ್ತ ಉದ್ಯೋಗಿ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಾಧವ ರೈ (62) ಎಂಬವರು ಕೋಡಿಂಬಾಳ ರೈಲು ಮಾರ್ಗದ ಸಮೀಪ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಇದೊಂದು ಆತ್ಮಹತ್ಯೆ ಪ್ರಕರಣ ಆಗಿರಬೇಕೆಂದು ಶಂಕಿಸಲಾಗಿದ್ದು, ಮೃತ ದೇಹವನ್ನು ಮರಣೊತ್ತರ ಪರೀಕ್ಷೆಗಾಗಿ ಕಡಬ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಮೃತರು ಕೋಡಿಂಬಾಳದ ಅಯಪ್ಪ ಭಜನಾ ಮಂದಿರದ ಸೇವಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದರು.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಡಬ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತ್ನಿ ಹಾಗೂ 6 ಮಂದಿ ಮಕ್ಕಳನ್ನು ಅಗಲಿದ್ದಾರೆ.





