ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ನಿಧನ
ಮಂಗಳೂರು: ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ಪಿ ರಮಾನಾಥ ಹೆಗ್ಡೆ(72) ಅವರು ಅಲ್ಪಕಾಲದ ಅಸೌಖ್ಯದಿಂದ ಜ.16ರಂದು ನಿಧನರಾದರು.
ಮಂಗಳಾದೇವಿ ದೇವಸ್ಥಾನದಲ್ಲಿ ಕಳೆದ 31 ವರ್ಷಗಳಿಂದ ಆಡಳಿತ ಮೊಕ್ತೇಸರರಾಗಿ ಅವರು ಸೇವೆ ಸಲ್ಲಿಸಿದ್ದರು.
ನಗರದ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸ್ಥಾಪಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರ ಅಂತಿಮ ದರ್ಶನ ಬುಧವಾರ ಬೆಳಿಗ್ಗೆ ದೇವಸ್ಥಾನದ ಸಮೀಪದ ಸ್ವಗೃಹದಲ್ಲಿ ನಡೆಯಲಿದ್ದು, ನಂದಿಗುಡ್ಡೆ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.
ರಮಾನಾಥ ಹೆಗ್ಡೆ ಅವರ ನಿಧನಕ್ಕೆ ಅನುವಂಶಿಕ ಮೊಕ್ತೇಸರರಾದ ರಘುರಾಮ್ ಉಪಾಧ್ಯಾಯ, ಎಸ್ ಹರೀಶ್ ಐತಾಳ್, ಎಂ ಅರುಣ್ ಐತಾಳ್, ಶ್ರೀನಿವಾಸ ಐತಾಳ್, ಪರ್ಯಾಯ ಅರ್ಚಕ ವಾಸುದೇವ ಐತಾಳ್, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಂಗಳೂರು ನಗರ ಪಾಲಿಕೆ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಮೀನುಗಾರ ಮುಖಂಡ ನಿತಿನ್ ಕುಮಾರ್ ಮೊದಲಾದವರು ಸಂತಾಪ ಸೂಚಿಸಿದ್ದಾರೆ. ಇವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.





