ಮಂಗಳೂರು: ಸಿದ್ದರಾಮಯ್ಯರನ್ನು ನಿಂದಿಸಿದ ವೀಡಿಯೊ ವೈರಲ್, ಆರೋಪಿಯ ಬಂಧನ
ಮಂಗಳೂರು: ಅಶ್ಲೀಲ ಪದಗಳಿಂದ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸಿ ವೀಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನಿವಾಸಿ ಅನಿಲ್ ಕುಮಾರ್ (34)ನನ್ನು ಪೊಲೀಸರು ಬಂಧಿಸಿದ್ದಾರೆ.
ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯುವ ಸಲುವಾಗಿ ತನ್ನ ಹೆಸರನ್ನು ಪಡಿತರ ಚೀಟಿಯಲ್ಲಿ ಸೇರಿಸಲು ಯತ್ನಿಸಿದ್ದು ವಿವಿಧ ಸಮಸ್ಯೆಗಳಿಂದ ಕಳೆದ 3 ತಿಂಗಳಿಂದ ಸೇರಿಸಲು ಸಾಧ್ಯವಾಗಲಿಲ್ಲ. ಇದರಿಂದ ಕೋಪಗೊಂಡು ವೀಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸುರತ್ಕಲ್ ಪೊಲೀಸರು ಆರೋಪಿ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.





