March 18, 2026

ಮದುವೆಯಾಗಲು ಸಿಗದ ಹೆಣ್ಣು: ಮನನೊಂದು ಯುವಕ ಆತ್ಮಹತ್ಯೆ

0
image_editor_output_image-217942107-1705467563752.jpg

ವಿಜಯನಗರ: ಮದುವೆಯಾಗಲು ಯಾರೂ ಹೆಣ್ಣು ಕೊಡುತ್ತಿಲ್ಲ ಎಂದು ಮನನೊಂದು ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಬಿ.ಮಧುಸೂಧನ್ (26) ಮೃತ ಯುವಕ ಎಂದು ತಿಳಿದು ಬಂದಿದೆ.

ಆತ ಜ.5 ರಂದೇ ವಿಷ ಸೇವಿಸಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವನ್ನಪ್ಪಿದ್ದಾನೆ.

ಯುವಕ ಯಾಕೆ ವಿಷ ಸೇವಿಸಿದ್ದಾನೆ ಎಂಬ ವಿಚಾರ ಮೊದಲಿಗೆ ತಿಳಿದು ಬಂದಿರಲಿಲ್ಲ. ಆತ ಮೃತಪಟ್ಟ ಬಳಿಕ ಪೊಲೀಸರು ಆತನ ಸ್ನೇಹಿತರನ್ನು ವಿಚಾರಿಸಿದಾಗ ಯುವಕನ ಸಾವಿಗೆ ಕಾರಣ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!