ಪರಾರಿಯಾಗಿದ್ದ ಕೊಲೆ ಆರೋಪಿಯ ಮತ್ತೆ ಬಂಧನ
ಚಿಕ್ಕಮಗಳೂರು: ಪೊಲೀಸರಿಂದ ಗುಂಡೇಟು ತಿಂದರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕಣ್ತಪ್ಪಿಸಿ ಪರಾರಿಯಾಗಿದ್ದ ಕೊಲೆ ಆರೋಪಿಯನ್ನು ಇದೀಗ ಮತ್ತೆ ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ಎನ್.ಆರ್ ಪುರದ ಬಾಳೆಹೊನ್ನೂರು ಸಮೀಪದ ಮಾಗಲು ಗ್ರಾಮದ ಪೂರ್ಣೇಶ್ ಬಂಧಿತ ಆರೋಪಿಯಾಗಿದ್ದಾನೆ. ಈತ ಕಳೆದ ಶನಿವಾರ ಜಿಲ್ಲಾಸ್ಪತ್ರೆಯಿಂದ ನಾಪತ್ತೆಯಾಗಿದ್ದ. ಇಂದು ಮಾಗಲು ಗ್ರಾಮದ ಬಸ್ ನಿಲ್ದಾಣದ ಬಳಿ ಇದ್ದಾಗ ಬಾಳೆಹೊನ್ನೂರು ಪೊಲೀಸರು ಈತನನ್ನು ಬಂಧಿಸಿದ್ದಾರೆ.





