March 18, 2026

ಮಂಗಳೂರು: ಬೈಕ್ ಗೆ ಕಾರು ಢಿಕ್ಕಿ: ಸವಾರ ಮೃತ್ಯು

0
image_editor_output_image-1857303342-1705491030918.jpg


 

ಮಂಗಳೂರು: ನಗರದ ಕಾವೂರಿನಲ್ಲಿ ಮಂಗಳವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಖಾಸಗಿ ಕಂಪೆನಿಯೊಂದರ ಉದ್ಯೋಗಿಮೃತಪಟ್ಟಿದ್ದಾರೆ.

ಶೇಖರಪ್ಪ ಮೃತ ದುರ್ದೈವಿಯಾಗಿದ್ದಾರೆ. ಇವರು ಖಾಸಗಿ ಸಂಸ್ಥೆಯೊಂದರಲ್ಲಿ ಪೋರ್ಟ್ ಫೆಸಿಲಿಟೀಸ್ ವಿಭಾಗಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮಂಗಳವಾರ ರಾತ್ರಿ ಸುಮಾರು 11 ಗಂಟೆ ಹೊತ್ತಿಗೆ ತಮ್ಮ ಕ್ವಾಟರ್ಸ್ ಕಂಪೌಂಡ್ ಗೆ ಹೋಗಲು ಡಿವೈಡರ್ ಕಡೆಯಿಂದ ಬೈಕ್ ತಿರುಗಿಸಿದಾಗ ಬೋಂದೆಲ್‌ನಿಂದ ಕಾವೂರು ಕಡೆಗೆ ಬರುತ್ತಿದ್ದ ಕಾರೊಂದು ವೇಗವಾಗಿ ಬಂದು ಇವರ ಬೈಕಿಗೆ ಢಿಕ್ಕಿ ಹೊಡೆದಿದೆ.

ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಶೇಖರಪ್ಪರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ. ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!