ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆ
ಶಿವಮೊಗ್ಗ: ಪರಸ್ಪರ ಪ್ರೀತಿಸಿ ಕಳೆದ 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ನವವಿವಾಹಿತೆಯನ್ನು ಶಮಿತಾ (24) ಎಂದು ಗುರುತಿಸಲಾಗಿದೆ. ರಾತ್ರಿ ಮಲಗಲು ಮನೆಯ ಉಪ್ಪರಿಗೆಯ ಕೊಠಡಿಗೆ ತೆರಳಿದ್ದ ಶಮಿತಾ ಬೆಳಗ್ಗೆ ಬಹಳ ಹೊತ್ತಾದರೂ ಹೊರ ಬಂದಿರಲಿಲ್ಲ.
ಇದರಿಂದ ಅನುಮಾನಗೊಂಡ ಮನೆಯ ಕೆಲಸದವರು ಕಿಟಕಿ ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.





