ಬೆಳ್ತಂಗಡಿ ದೇವಸ್ಥಾನಕ್ಕೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ ನೀಡಿ
ಬೆಳ್ತಂಗಡಿ: ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಭಾರತೀಯ ಕ್ರಿಕೇಟ್ ತಂಡದ ಉಪನಾಯಕ ಕೆ.ಎಲ್.ರಾಹುಲ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಬುಧವಾರ ಮದ್ಯಾಹ್ನ ಕ್ಷೇತ್ರಕ್ಕೆ ಆಗಮಿಸಿದ ರಾಹುಲ್ ಕ್ಷೇತ್ರದ ಗಣಪತಿ ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಮೂಲತಃ ಮಂಗಳೂರಿನವರೇ ಆಗಿರುವ ರಾಹುಲ್ ಈ ಹಿಂದೆ ಹಲವಾರು ಬಾರಿ ಕುಕ್ಕೆ ಸುಬ್ರಹ್ಮಣ್ಯ ಸಹಿತವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಹಲವು ದೇವಾಲಯಗಳಿಗೆ ಭೇಟಿ ನೀಡಿದ್ದಾರೆ. ಇಂದು ಯಾವುದೇ ಮಾಹಿತಿ ನೀಡದೇ ಸೌತಡ್ಕಕ್ಕೆ ಭೇಟಿ ನೀಡಿದ ರಾಹುಲ್ ಆಶ್ಚರ್ಯ ಮೂಡಿಸಿದ್ದಾರೆ. ಕ್ಷೇತ್ರದ ವತಿಯಿಂದ ರಾಹುಲ್ ಅವರಿಗೆ ವಿಶೇಷ ಗೌರವ ಸಲ್ಲಿಸಿ ದೇವರ ಮುಂದೆ ಅವರ ಮುಂದಿನ ಕ್ರಿಕೇಟ್ ಜೀವನಕ್ಕೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ.





